ಬೆಂಗಳೂರು : ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಿಸಲ್ಟ್ ನೋಡುವುದು ಎಲ್ಲಿ?
ಪತ್ರಿಕಾಗೋಷ್ಠಿ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
karresults.nic.in
kseab.karnataka.gov.in
ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ಆನ್ಲೈನ್ನಲ್ಲಿ ಫಲಿತಾಂಶ ನೋಡುವುದ್ಹೇಗೆ?
ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.
ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ
ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.