ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿ ಏರಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 185 ರೂ ಹೆಚ್ಚಳವಾಗಿದೆ. ಒಂದು ಗ್ರಾಮ್ ಚಿನ್ನದ ಬೆಲೆ 8,754 ರೂ ಮುಟ್ಟಿದೆ. ಬೆಳ್ಳಿ ಬೆಲೆಯೂ ಕೂಡ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಗ್ರಾಮ್ ಬೆಳ್ಳಿ 98 ರೂ ಬೆಲೆ ಹೊಂದಿದೆ. ಇತರ ಕೆಲವೆಡೆ ಬೆಲೆ 108 ರೂಗೆ ಏರಿದೆ.

ಬೆಂಗಳೂರು : ನಿನ್ನೆ ಗ್ರಾಮ್ಗೆ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ (Gold Rate today) ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದೆ. ಎರಡು ದಿನದಲ್ಲಿ ಇದರ ಬೆಲೆ 450 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಇತ್ತು 202 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲಯೂ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,540 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 11ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 87,540 ರೂ
ಚೆನ್ನೈ: 87,540 ರೂ
ಮುಂಬೈ: 87,540 ರೂ
ದೆಹಲಿ: 87,690 ರೂ
ಕೋಲ್ಕತಾ: 87,540 ರೂ
ಕೇರಳ: 87,540 ರೂ
ಅಹ್ಮದಾಬಾದ್: 87,590 ರೂ
ಜೈಪುರ್: 87,690 ರೂ
ಲಕ್ನೋ: 87,690 ರೂ
ಭುವನೇಶ್ವರ್: 87,540 ರೂ

