ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?

ಬೆಂಗಳೂರು, ಏಪ್ರಿಲ್ 16: ಇಂದು ಕೂಡ ಬೆಂಗಳೂರಿನಲ್ಲಿ ಮಳೆ(Rain)ಯಾಗುವ ಸಂಭವವಿದ್ದು, ರಾಜ್ಯದ ಕೆಲವೆಡೆ ಒಣಹವೆ ಇದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್​, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರ, ಹಿರೆಕೆರೂರು, ಕುಶಾಲನಗರ, ಹಾರಂಗಿ, ಭಾಗಮಂಡಲ, ನಾಪೋಕ್ಲು, ಎಂಎಂ ಹಿಲ್ಸ್​, ಶೃಂಗೇರಿ, ಬಂಡೀಪುರ, ಕೆಆರ್ ನಗರ, ಹೆಸರಘಟ್ಟ, ಕಳಸ, ಬೇಗೂರು, ಆಗುಂಬೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.