
ಬೆಂಗಳೂರು, ಏಪ್ರಿಲ್ 22: ಚಿನ್ನದ ಬೆಲೆ (Gold rates) ಸಿಕ್ಕಾಪಟ್ಟೆ ಏರುತ್ತಿದೆ. ನಿನ್ನೆ ಗ್ರಾಮ್ಗೆ 70 ರೂ ಹೆಚ್ಚಿದ್ದ ಅದರ ಬೆಲೆ ಇವತ್ತು ಬರೋಬ್ಬರಿ 275 ರೂನಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನವಂತೂ ಗ್ರಾಮ್ಗೆ 300 ರೂನಷ್ಟು ಹೆಚ್ಚಳವಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ ಇದೇ ಮೊದಲ ಬಾರಿಗೆ 10,000 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ ಈ ಶುದ್ಧ ಚಿನ್ನದ ಬೆಲೆ ಗ್ರಾಮ್ಗೆ 10,135 ರೂ ಬೆಲೆ ಪಡೆದಿದೆ. ಆಭರಣ ಚಿನ್ನದ ಬೆಲೆ ಭಾರತದಲ್ಲಿ ಮೊದಲ ಬಾರಿಗೆ 9,300 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ದಾಖಲೆ ಬರೆದಿದೆ. ಅಮೆರಿಕ ಸೇರಿದಂತೆ ಎಲ್ಲಾ ದೇಶಗಳಲ್ಲೂ ಸಾರ್ವಕಾಲಿಕ ಗರಿಷ್ಠ ಬೆಲೆ ದಾಖಲಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,010 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 92,900 ರೂ
- ಚೆನ್ನೈ: 92,900 ರೂ
- ಮುಂಬೈ: 92,900 ರೂ
- ದೆಹಲಿ: 93,050 ರೂ
- ಕೋಲ್ಕತಾ: 92,900 ರೂ
- ಕೇರಳ: 92,900 ರೂ
- ಅಹ್ಮದಾಬಾದ್: 92,950 ರೂ
- ಜೈಪುರ್: 93,050 ರೂ
- ಲಕ್ನೋ: 93,050 ರೂ
- ಭುವನೇಶ್ವರ್: 92,900 ರೂ

