ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿಗೆ ಮೇ 3 ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

ಕುಮಟಾ – 26 : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ರಾಜ್ಯದಲ್ಲಿ ತನ್ನದೇಯಾದ ಛಾಪು ಮೂಡಿಸಿರುವ ಕುಮಟಾದ ಗೋರೆಯ ಕೆನರಾ ಎಕ್ಸಲೆನ್ಸ ಪಿಯು ಕಾಲೇಜಿಗೆ ಮೇ 3 ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3ಕ್ಕೆ ಶಿಕ್ಷಣ ಸಚಿವರು ಗೋರೆಯ ಕೆನರಾ ಎಕ್ಸಲೆನ್ಸ ಪಿಯು ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ವಿಷಯದ ಕುರಿತು ಮುಕ್ತವಾಗಿ ಪ್ರಶ್ನೋತ್ತರ ರೂಪದಲ್ಲಿ ಸಂವಾದ ನಡೆಸಲಿದ್ದಾರೆ. ಹಾಗೇ ಇದೇ ವೇಳೆ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.

ಇದೇ ವೇಳೆ ಸಚಿವರನ್ನು ಸಂಸ್ಥೆ ವತಿಯಿಂದ ಸತ್ಕರಿಸಲಾಗುವುದು. ಸಂಸ್ಥೆ ಅಧ್ಯಕ್ಷ ಡಾ.ಜಿ.ಜಿ.ಹೆಗಡೆ ಅವರು ಅಧ್ಯಕ್ಷತೆ ವಹಿಸಲಿದ್ದು ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ. ತಮ್ಮದೇ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಸೇರಿಸಿಕೊಳ್ಳಲು ಪೈಪೋಟಿಯನ್ನು ನಡೆಸುತ್ತಾರೆ. ಆದ್ರೆ ಈ ಶಿಕ್ಷಣ ಸಂಸ್ಥೆ ಹಾಗಲ್ಲ.. ಇಲ್ಲಿಗೆ ಮಕ್ಕಳನ್ನು ಸೇರಿಸಿಲು ಪೋಷಕರೇ ಪೈಪೋಟಿ ಮಾಡ್ತಾರೆ. ತನ್ನ ಸರ್ವಶ್ರೇಷ್ಠ ಗುಣಮಟ್ಟದ ಶಿಕ್ಷಣದಿಂದಲೇ ಪ್ರಸಿದ್ಧಿ ಪಡೆದಿರುವ ಈ ಶಿಕ್ಷಣ ಸಂಸ್ಥೆ ಗೋರೆಯ ಕೆನರಾ ಎಕ್ಸಲೆನ್ಸ ಪಿಯು ಕಾಲೇಜ್‌.

ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ ವಿದ್ಯಾರ್ಥಿಗಳನ್ನಾಗಿಸುವ.. ತಮ್ಮ ಮಕ್ಕಳು ಹೀಗಾಗಬೇಕು ಎಂದು ಪೋಷಕರು ಕಂಡಿರುವ ಕನಸನ್ನು ನನಸಾಗಿಸುವ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜ್, ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು ಮತ್ತು ಸಂಸ್ಕಾರವನ್ನು ಕಲಿಸುವ ಸಂಗಮವಾಗಿರುವುದರಿಂದಲೇ ಬೆಂಗಳೂರಿನಲ್ಲಿರುವರು ಕೂಡ ತಮ್ಮ ಮಕ್ಕಳನ್ನು ಈ ಕಾಲೇಜಿಗೆ ಸೇರಿಸ್ತಾರೆ. ಮಕ್ಕಳಿಗೆ ವಾಸ್ತವದ ನೆಲೆಗಟ್ಟಿನಲ್ಲಿ ಮತ್ತು ಪ್ರಾಯೋಗಿಕ ತರಬೇತಿಗಳಿಂದ ಶಿಕ್ಷಣ ನೀಡುತ್ತಿರುವದರಿಂದ ಕೆನರಾ ಎಕ್ಸ್‌ಲೆನ್ಸ್‌ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯಿಂದ ರಾಜ್ಯಮಟ್ಟದಲ್ಲಿ ಸದ್ದು ಮಾಡ್ತಿದ್ದಾರೆ.