ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಮೇಲೆ ನಿಷೇಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಅಮಾನತು ತೆರವುಗೊಳಿಸಲು ಫಿಫಾದೊಂದಿಗೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎ.ಎಸ್.ಬೋಪಣ್ಣ ಮತ್ತು ಜೆ.ಬಿ.ಪಾರ್ಡಿವಾಲಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ಅವರ ಕೋರಿಕೆಯಂತೆ AIFFಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.
ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಅನ್ನು ಅಮಾನತುಗೊಳಿಸುವ ಬಗ್ಗೆ ಕೇಂದ್ರ ಸರ್ಕಾರವು ಫಿಫಾದೊಂದಿಗೆ ಮಾತುಕತೆ ನಡೆಸಿದೆ ಎಂದು ಭಾರತದ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್ಗೆ ತಿಳಿಸಿದರು.