ಎಸ್​ಎಸ್​ಎಲ್​ಸಿ ಫಲಿತಾಂಶ: ಶಿವಮೊಗ್ಗದ ನಮನ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ 2025 ಟಾಪರ್: ಇಂದು 2025ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್ ಬಂದಿದೆ.

kseab.karnataka.gov.in – Karnataka SSLC Class 10 Result 2025

ಬೆಂಗಳೂರು, ಮೇ 02: ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಇಂದು, ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ 2025ವನ್ನು ಪ್ರಕಟಿಸಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್ ಬಂದಿದೆ.

ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶವೆಂದರೆ SSLC ಫಲಿತಾಂಶ 2025 ಕರ್ನಾಟಕವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ, ಅಂದರೆ karresults.nic.in ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ.66.14ರಷ್ಟು ಫಲಿತಾಂಶ ಬಂದಿದೆ. ಇಂದಿನಿಂದಲೇ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.