CISCE-12ನೇ ತರಗತಿ ಪರೀಕ್ಷೆಯಲ್ಲಿ ಫಸ್ಟ್ ರ‍್ಯಾಂಕ್‌! ಪುತ್ರನ ಸಾಧನೆ ಬಗ್ಗೆ ಸಂತಸ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಐಎಸ್‌ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪುತ್ರ ಶೇ.98.25 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಬಿಷಪ್ ಕಾಟನ್ ಶಾಲೆಗೆ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ‘ನನ್ನ ಮಗ ಸೂರ್ಯ ಮಧು ಬಂಗಾರಪ್ಪ ಐಸಿಎಸ್ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಶೇ.98.25 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಬಿಷಪ್ ಕಾಟನ್ ಶಾಲೆಗೆ ಮೊದಲನೇ ರ‍್ಯಾಂಕ್‌ ಪಡೆದಿದ್ದಾನೆ ಎಂದು ತಿಳಿಸಲು ಅತೀವ ಸಂತೋಷವಾಗುತ್ತಿದೆ ಎಂದು ತಿಳಿಸಿದ್ದಾರೆ.