SSLC ಫಲಿತಾಂಶ : ಅಳ್ಳಂಕಿ ಡಾ. ಬಿ.ಆರ್.ಅಂಬೇಡ್ಕರ ವಸತಿ ಶಾಲೆ ಸಾಧನೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟಾರೆ ಶೇಕಡಾ 62.34ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 91.12 ರೊಂದಿಗೆ ಪ್ರಥಮ ಸ್ಥಾನ ಪಡೆದಿದ್ರೆ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಶೇಕಡಾ 83.19ರಷ್ಟು ಫಲಿತಾಂಶ ದಾಖಲಿಸಿ ಉತ್ತರ ಕನ್ನಡ ಜಿಲ್ಲೆ 3ನೇ ಸ್ಥಾನ ಪಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿಯ ಡಾ. ಬಿ.ಆರ್.ಅಂಬೇಡ್ಕರ ವಸತಿ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಈ ಬಾರಿ ಅಳ್ಳಂಕಿಯ ಡಾ. ಬಿ.ಆರ್.ಅಂಬೇಡ್ಕರ ವಸತಿ ಶಾಲೆ ಶೇಕಡಾ 97.43ರಷ್ಟು ಫಲಿತಾಂಶ ದಾಖಲಿಸಿದೆ. 16 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆ ಪಡೆದ್ರೆ, 19 ವಿದ್ಯಾರ್ಥಿಗಳು ಪ್ರಥಮ ಧರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಇಬ್ಬರು ದ್ವಿತೀಯ ದರ್ಜೆ ಮತ್ತು ಒಬ್ಬ ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

(ಪ್ರಥಮ )ಸೌಜನ್ಯ ನಾಯ್ಕ ಶೇ. 98.08, (ದ್ವಿತೀಯ) ವಿನಾಯಕ ನಾಯ್ಕ ಶೇ.97.79, (ತೃತೀಯ) ವಿನಯಕುಮಾರ ಪಟಗಾರ ಶೇ. 97.44% ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇನ್ನು ಹಿಂದಿಯಲ್ಲಿ 11 ವಿದ್ಯಾರ್ಥಿಗಳು, ಗಣಿತದಲ್ಲಿ ಒಬ್ಬ ಮತ್ತು ಸಮಾಜ ವಿಜ್ಞಾನದಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಅಂಕ ಪಡೆದು ಶಾಲೆಯ ಹಿರಿಮೆ ಹೆಚ್ಚಿಸಿದ್ದಾರೆ.

ಅವಿರತ ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ, ಶಿಕ್ಷಕರ ಹೆಗಲಿಗೆ ಹೆಗಲಾಗಿ ಸಹಕರಿಸಿದ ಎಲ್ಲಾ ಶಿಕ್ಷಕೇತರ ಸಿಬ್ಬಂದಿಗಳಿಗೆ, ಬೆಂಬಲ ನೀಡಿದ ಪಾಲಕರಿಗೆ, ಶ್ರದ್ಧೆಯಿಂದ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡಿದ ಮಾನ್ಯ ಉಪನಿರ್ದೇಶಕರಿಗೆ ಅಳ್ಳಂಕಿಯ ಡಾ. ಬಿ.ಆರ್.ಅಂಬೇಡ್ಕರ ವಸತಿ ಶಾಲೆಯ ಪ್ರಾಂಶುಪಾಲರು ಅಭಿನಂದನೆಗಳನ್ನು ತಿಳಿಸಿದ್ದಾರೆ.