
ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಸ್ವತಃ ಪಾಕ್ ಪ್ರಧಾನಿಯೇ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಮೇ 10 ರ ಮುಂಜಾನೆ ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಪಾಕಿಸ್ತಾನದೊಳಗಿನ ಇತರ ವಾಯು ನೆಲೆ ಹಾಗೂ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್ ಮುನೀರ್ (Asim Munir) ಅವರು ಬೆಳಗಿನ ಜಾವ 2:30 ಕ್ಕೆ ಕರೆ ಮಾಡಿ ಎಲ್ಲವನ್ನು ವಿವರಿಸಿದರು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ವಿಡಿಯೋವೊಂದುನ್ನು ಹಂಚಿಕೊಂಡಿದ್ದಾರೆ.



