ಕೋವಿಡ್‌ ಏರಿಕೆ – ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ.

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು 95 ಸಕ್ರಿಯ ಪ್ರಕರಣಗಳು ಇವೆ. ಕರ್ನಾಟಕದಲ್ಲಿ 33 ಕೇಸ್ ದಾಖಲಾಗಿದ್ದು ಈ ಪೈಕಿ 16 ಸಕ್ರಿಯ ಪ್ರಕರಣಗಳಾಗಿವೆ.