ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 24: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾಗಬಹುದು ಎಂದು ಈ ವಾರ ಆರಂಭದಿಂದಲೂ ವಿದ್ಯಾರ್ಥಿಗಳು ಕಾಯುತ್ತಿದ್ದರು. ಇದೀಗ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್  ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಹೇಳಿದರು.

ಯಾರೆಲ್ಲ ಸಿಇಟಿ ಟಾಪರ್ಸ್​?

ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ್ಯಾಂಕ್ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದರು.