
ಸಿದ್ದಾಪುರ .. ಸಮಾಜದ ಹಿರಿಯರು ಹಿಂದಿನಿಂದಲೂ ಪಟ್ಟಂತಹ ಅವಿರತ ಪ್ರಯತ್ನದ ಫಲವಾಗಿ ಇಂದು ಶ್ರೀ ಲಕ್ಷ್ಮಿ ನಾರಾಯಣ ದೇವಮಂದಿರದ ಕಟ್ಟಡದ ಕಾಮಗಾರಿಯು ಸುಂದರವಾಗಿ ಭವ್ಯವಾಗಿ ನಿರ್ಮಾಣಗೊಳ್ಳುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ಕರ್ಕಿ ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು ನುಡಿದರು.
ಶ್ರೀಗಳು ಸಿದ್ದಾಪುರ ದೈವಜ್ಞ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮಿ ನಾರಾಯಣ ದೇವಾಲಯಕ್ಕೆ ಭೇಟಿ ನೀಡಿ ನವೀಕರಣ ಗೊಳ್ಳುತ್ತಿರುವ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ ಶ್ರೀಗಳು ಈ ದೇವಾಲಯಕ್ಕೆ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ರವರ ಪೂರ್ಣ ಅನುಗ್ರಹ ಇದೆ.ಸಮಾಜದ ಎಲ್ಲರ ಸಹಕಾರದಿಂದ ಈ ಕಟ್ಟಡದ ಕಾಮಗಾರಿಯು ಪೂರ್ಣಗೊಳ್ಳಲಿ. ಒಳಗೆ ಕುಳಿತಿರುವ ಶ್ರೀ ಲಕ್ಷ್ಮೀನಾರಾಯಣ ದೇವರು ಈ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ ಹಾಗೂ ಶ್ರೀ ಜಾನೇಶ್ವರೀ ದೇವಿಯ ಸಂಪೂರ್ಣ ಆಶೀರ್ವಾದ ಇದೆ ಎಂದು ನುಡಿದರು. ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಾಂತರಾಮ್ ವಿ. ಶೇಟ್ ಹಾಗೂ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಶ್ರೀಗಳಿಗೆ ಫಲ ತಾಂಬೂಲ ನೀಡಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಹಿರಿಯರು,ಯುವಕ ಸಂಘದ ಪದಾಧಿಕಾರಿಗಳು,ಶ್ರೀ ರಾಜರಾಜೇಶ್ವರಿ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.ಎಲ್ಲ ಭಕ್ತಾದಿಗಳಿಗೂ ಶ್ರೀಗಳು ಮಂತ್ರಾಕ್ಷತೆ ಅನುಗ್ರಹಿಸಿ ಆಶೀರ್ವದಿಸಿದರು. ರಮೇಶ್ ಕೆ.ರಾಯಕರ ಸ್ವಾಗತಿಸಿದರು.
