ಕಾರವಾರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯ್ಲಿ ಆ. 20 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ.
ಹೊನ್ನಾವರ ವೃತ್ತದ ಬಳಿಯಿರುವ ನಾಮಧಾರಿ ವಿದ್ಯಾರ್ಥಿನಿಲಯದಲ್ಲಿ ದಿ. ಡಿ. ದೇವರಾಜ ಅರಸು ವಿಚಾರ ವೇದಿಕೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವೇದಿಕೆ ವತಿಯಿಂದ ಆಯೋಜಿಸಲಾಗಿರುವ ಡಿ. ದೇವರಾಜ ಅರಸು 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ 25 ವರ್ಷ ಹಾಗೂ ಅದಕ್ಕೂ ಹೆಚ್ಚು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟಕರಾಗಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಬಳಿಕ ರಸ್ತೆ ಮಾರ್ಗದ ಮೂಲಕ ಮಧ್ಯಾಹ್ನ 12 ಗಂಟೆಗೆ ಹೊನ್ನಾವರಕ್ಕೆ ಆಗಮಿಸುವ ಮೊಯ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಧ್ಯಾಹ್ನ 3.30 ಕ್ಕೆ ಮಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ. ರಾತ್ರಿ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.



