IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​​ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು , ಪಂಜಾಬ್ ಕಿಂಗ್ಸ್ , ಮುಂಬೈ ಇಂಡಿಯನ್ಸ್ಹಾ ಗೂ ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿಯಲಿವೆ.

ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ…

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ.  ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.