ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.  

ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಕೇಸ್‌ ದಾಖಲಾಗಿದೆ.

ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.