ಹೊನ್ನಾವರ: ಅಪ್ರಾಪ್ತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಕುರಿತು ಸಂತ್ರಸ್ಥೆ ಮಂಗಳವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಆರೋಪಿ ಗೇರುಸೊಪ್ಪಾ ದೇವಿಗದ್ದೆ ನಿವಾಸಿ 21 ವರ್ಷದ ಯುವಕ ಸಂದೇಶ ಮಂಜುನಾಥ ನಾಯ್ಕ ಎಂದು ಗುರುತಿಸಲಾಗಿದೆ. ಅಪ್ರಾಪ್ತೆಯನ್ನು ಪ್ರೀತಿಸಿ ಕಳೆದ ನಾಲ್ಕು ತಿಂಗಳಿಂದ ಮನೆಯಲ್ಲೇ ಇರಿಸಿಕೊಂಡು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.
ಇದೀಗ ಮತ್ತೊಂದು ಯುವತಿಯ ಜೊತೆ ಸುತ್ತಾಡುತ್ತಿದ್ದು, ಈ ವಿಚಾರ ಸಂತ್ರಸ್ಥೆಯ ಮನಕ್ಕೆ ಬಂದಿತ್ತು. ತನಗೆ ಮೋಸ ಮಾಡಿದ್ದಾನೆ ಎಂದು ಅಪ್ರಾಪ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಮಾಹಿತಿ ಲಭಿಸಿದ್ದು, ತನಿಖೆ ಮುಂದುವರೆಸಿದ್ದಾರೆ.