ಎಂ.ಪಿ.ಇ.ಸೊಸೈಟಿಯ ಸೆಂಟ್ರಲ್ ಸ್ಕೂಲ್‌ನಲ್ಲಿ ಪರಿಸರ ದಿನಾಚರಣೆ

ಹೊನ್ನಾವರ ಜೂ.06 : ಹೊನ್ನಾವರ ಪಟ್ಟಣದ ಎಂ.ಪಿ.ಇ.ಸೊಸೈಟಿಯ ಸೆಂಟ್ರಲ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯ್ತು..

ವೃಕ್ಷೋ ರಕ್ಷತಿ ರಕ್ಷಿತಃ ಎಂಬಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಇಂದಿನ ಯುವ ಪೀಳಿಗೆ ಈ ಕೆಲಸದಲ್ಲಿ ನಿಷ್ಠೆಯಿಂದ ಪಾಲ್ಗೊಂಡಲ್ಲಿ ಮಾತ್ರ ಪರಿಸರ ದಿನಾಚರಣೆಗೆ ಒಂದು ಮೌಲ್ಯ ಸಿಗುತ್ತದೆ. ಈ ನಿಟ್ಟಿನಲ್ಲಿ ಎಂ.ಪಿ.ಇ.ಸೊಸೈಟಿಯ ಸೆಂಟ್ರಲ್ ಸ್ಕೂಲ್ನಲ್ಲಿ ಪರಿಸರ ದಿನಾಚರಣೆ ಒಂದು ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ತಮ್ಮ ಶಾಲಾ ಆವರಣದಲ್ಲಿ ಉಪಯುಕ್ತವಾದ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದ್ರು. ಪ್ರಾಂಶುಪಾಲರಾದ ಡಾ.ವಿಜಯಲಕ್ಷ್ಮೀ ನಾಯ್ಕ ,ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.