ನಿಲುಗಡೆ ಸ್ಥಳದಲ್ಲೂ ನಿಲ್ಲಿಸದ ಬಸ್: ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ

ಮುಂಡಗೋಡ: ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ನಿಲ್ಲಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇತ್ರತ್ವದಲ್ಲಿ ಹುಬ್ಬಳ್ಳಿ ಶಿರಸಿ ರಾಜ್ಯ ಹೆದ್ದಾರಿಯನ್ನು ಗುರುವಾರ ಬಾಚಣಕಿ ಗ್ರಾಮದಲ್ಲಿ ರಸ್ತೆ ತಡೆದು ಒಂದು ಗಂಟೆ ಪ್ರತಿಭಟನೆ ನಡೆಸಿದ್ದಾರೆ.

ಕೆ. ಎಸ್. ಆರ್. ಟಿ. ಸಿ ಬಸ್ ಗಳು ಶಾಲಾ ಕಾಲೇಜುಗಳಿಗೆ ತೆರಳುವಾಗ ಕೈ ಮಾಡಿದರೂ ನಿಲ್ಲಿಸದೇ ಹೋಗುತ್ತಾರೆ. ಅದಕ್ಕಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದರು. ಇದರಿಂದ ಒಂದು ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ ಆಗಿ ಕಿಲೋ ಮೀಟರ್ ವರೆಗೆ ವಾಹನಗಳು ನಿಂತಿದ್ದವು . ಆದರು ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರ ಸಮಸ್ಯೆಯನ್ನು ಕೇಳಲಿಲ್ಲ. ಆಕ್ರೋಶಗೊಂಡ ಗ್ರಾಮಸ್ಥರು ಕರೆ ಮಾಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ನಂತರ ಸ್ಥಳಕ್ಕೆ ಬಂದ ಸಿಪಿಐ ಸಿದ್ದಪ್ಪ ಸಿಮಾನಿ ಪ್ರತಿಭಟನಾಕಾರರಿಗೆ ಬಸ್ ಡೀಪೋ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆ ಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ಸಣ್ಣಮನಿ, ಅಂಬರೀಶ್ ಸಾಗರ, ಗಿರೀಶ್, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.