‘ಸಿದ್ದರಾಮಯ್ಯ ಗೋಬ್ಯಾಕ್’ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಯುವಮೋರ್ಚಾ

ಮಡಿಕೇರಿ: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಕಪ್ಪು ಬಾವುಟ ಪ್ರದರ್ಶಿಸಿದೆ. ಸಿದ್ದು ಕಾರಿಗೆ ಗೋಬ್ಯಾಕ್ ಪೋಸ್ಟರ್ ಎಸೆದು ಕಪ್ಪು ಬಾವುಟ ಪ್ರದರ್ಶಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಲು ವಿರಾಜಪೇಟೆ ತಾಲೂಕಿನ ತಿತಿಮತಿ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.