
ಭಟ್ಕಳ: ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯಲ್ಲಿ ಸಹಾಯ ಮಾಡಿದ ಮೂವರು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ ನೀಡಿ ಅಭಿನಂದಿಸಿದರು.

ತನಿಖಾ ಸಹಾಯಕರಾಗಿ ದೀಪಕ್ ಎಸ್ ನಾಯ್ಕ ಭಟ್ಕಳ ಶಹರ ಪೊಲೀಸ್ ಠಾಣೆ, ವಿನಾಯಕ ಪಾಟೀಲ್ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಕೋರ್ಟ್ ಮಾನಿಟರಿಂಗ್ ನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ರಾಮಚಂದ್ರ ಕೆ, ಮುರ್ಡೇಶ್ವರ ಪೊಲೀಸ್ ಠಾಣೆ ರವರಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ.ಜಿ.ಡಿವೈಎಸ್ಪಿ ಮಹೇಶ ಕೆ ಉಪಸ್ಥಿತರಿದ್ದರು

