ಜಿಂಬಾಬ್ವೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಮೂಲಕ ಉತ್ತಮ ಆರಂಭ ಪಡೆಯಲು ಟೀಂ ಇಂಡಿಯಾ ಮುಂದಾಗಿದೆ.
ಭಾರತ ಪರ ಅನುಭವಿ ಎಡಗೈ ಬ್ಯಾಟರ್ ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಸ್ಪೋಟಕ ಎಡಗೈ ಬ್ಯಾಟರ್ ಇಶಾನ್ ಕಿಶನ್, ಕೆ ಎಲ್ ರಾಹುಲ್, ದೀಪಕ್ ಹೂಡಾ ಹಾಗೂ ಸಂಜು ಸ್ಯಾಮ್ಸನ್ ಭಾರತ ಮಧ್ಯಮ ಕ್ರಮಾಂಕದ ಬಲವನ್ನು ಹೆಚ್ಚಿಸಲಿದ್ದಾರೆ. ಇನ್ನು ಆಲ್ರೌಂಡರ್ ರೂಪದಲ್ಲಿ ಅಕ್ಷರ್ ಪಟೇಲ್ ಹಾಗೂ ದೀಪಕ್ ಚಹಾರ್ ಕಣಕ್ಕಿಳಿದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಕುಲದೀಪ್ ಯಾದವ್, ಪ್ರಸಿದ್ದ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಜಿಂಬಾಬ್ವೆ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.