ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ್​, ಜೂನ್​ 09: ನೂತನ ಚೆನೈ ಟು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಭೀಕರ ಅಪಘಾತ  ಸಂಭವಿಸಿದ್ದು, ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ  ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್​​ ಬಳಿ ನಡೆದಿದೆ. ರಾಜಾಸ್ಥಾನ ಮೂಲದ ಅಶೋಕ್(28) ಮತ್ತು ಮೋಹನ್ ಲಾಲ್(32) ಮೃತರು. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.