
ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎ ತನಿಖೆಗೆ ಕೊಟ್ಟಿರುವ ಬಗ್ಗೆ ಇಂದು ಸಭೆ ಮಾಡಿ ತೀರ್ಮಾನ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್‌ಐಎಗೆ ವಹಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಕೊಲೆ ಕೇಸ್ ಎನ್‌ಐಎಗೆ ಕೇಂದ್ರ ಗೃಹ ಇಲಾಖೆ ಕೊಟ್ಟಿದೆ ಎಂಬ ಮಾಹಿತಿ ಬಂದಿದೆ. ಕೇಂದ್ರದಿಂದ ಪತ್ರ ಬಂದಿರುವ ಬಗ್ಗೆ ಡಿಜಿ ಅವರು ನನ್ನ ಗಮನಕ್ಕೆ ತಂದಿದ್ದಾರೆ. ಯಾಕೆ ಕೊಟ್ಟರು ಎಂಬ ಮಾಹಿತಿ ಇಲ್ಲ. ಅಧಿಕೃತವಾಗಿ ಇವತ್ತು ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ಕೇಂದ್ರ ಗೃಹ ಇಲಾಖೆಗೆ ಯಾರು ಪತ್ರ ಬರೆದು ಮನವಿ ಮಾಡಿದ್ರೋ ಗೊತ್ತಿಲ್ಲ. ಬಿಜೆಪಿ ನಾಯಕರು, ಶಾಸಕರು, ಸಂಸದರು ಪತ್ರ ಬರೆದಿದ್ದರು ಅಂತ ನನಗೆ ಗೊತ್ತಿಲ್ಲ. ಆದರೆ ನಮಗೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಇವತ್ತು ಈ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
