ಇಂದು ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರಕನ್ನಡ ಜಿಲ್ಲೆಗೆ ಜೂ.೧೧ರಿಂದ ೧೭ರವರೆಗೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.೧೨ರಂದು ರಜೆ ಘೋಷಿಸಲಾಗಿದೆ.ಕಾರವಾರ, ಅಂಕೋಲಾ , ಕುಮಟಾ, ಹೊನ್ನಾವರಮತ್ತು ಭಟ್ಕಳ ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.