ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಆಯತಪ್ಪಿ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ವ್ಯಕ್ತಿಯೊಬ್ಬರು ಆಯತಪ್ಪಿ ಚರಂಡಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ.

ಬೀರಬಂದ ಓಣಿಯ ಹುಸೇನ ಕಳಸ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿ. ಹುಸೇನ ಅವರು ಬೆಳಗಲಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಯತಪ್ಪಿ ಚರಂಡಿಗೆ ಬಿದ್ದಿದ್ದರು. ಧಾರಕಾರ ಮಳೆಯಿಂದಾಗಿ ಚರಂಡಿಯಲ್ಲಿ ಭಾರೀ ನೀರು ಹರಿಯುತ್ತಿದ್ದ ಕಾರಣ ಹುಸೇನ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಹುಸೇನ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಇದುವರೆಗೆ ಪತ್ತೆಯಾಗಿಲ್ಲ. ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ