ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ʼಸಿದ್ದರಾಮಯ್ಯʼ

ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್‌ವೊಂದರ ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು

ಘಟನೆ ಏನು?
ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ

ಅಲ್ಲದೇ ಮೆಡಿಕಲ್ ಕಾಲೇಜಿಗೆ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 30 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.