ಭಾರಿ ಮಳೆ ಮುನ್ಸೂಚನೆ- ಈ ಜಿಲ್ಲೆಗಳಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಹೊನ್ನಾವರ ಜೂ.12: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕರವಾಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜೂ.12ರಂದು ಭಾರಿ ಮಳೆ ಹಿನ್ನೆಲೆಯಿಂದಾಗಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಭಾರಿ ಮಳೆಯಾಗುವ ಸಂಭವವಿದ್ದು, ನಾಳೆಯೂ ಅಂದರೆ ಜೂ.,13 ರಂದು ಉತ್ತರ ಕನ್ನಡ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲಾಡಳಿತಗಳು ನದಿ ತೀರ ಮತ್ತು ತಗ್ಗು ಪ್ರದೇಶದ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ…