
ಶಿರಸಿ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಎರಡು ದಿನದಿಂದ ಸುರಿಯುತ್ತಿರುವ ಮಳೆ ದೊಡ್ಡ ಅನಾಹುತವನ್ನೇ ತಂದೊಡ್ಡಿದೆ. ಇದೀಗ ಇಂದು ಸಂಜೆ ವೇಳೆ ಶಿರಸಿ- ಕುಮಟಾ ರಾಷ್ಟ್ರೀಯ ಹೆದ್ದಾರಿ ಯಲ್ಲಿ ದೇವಿಮನೆ ಘಟ್ಟ ಭಾಗದಲ್ಲಿ ಗುಡ್ಡ ಕುಸಿತವಾಗಿದೆ. ಕೆಲವು ದಿನದ ಹಿಂದೆ ಇದೇ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಇದೀಗ ಇದೇ ಭಾಗದಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು ಯಾವುದೇ ಅನಾಹುತವಾಗಿಲ್ಲ.

ಈ ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ, ದೊಡ್ಡ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು ಹೆಚ್ಚಿನ ವಾಹನ ಓಡಾಟ ಸಹ ಇಲ್ಲ ಹೀಗಾಗಿ ಯಾವುದೇ ಸಮಸ್ಯೆಗಳಾಗಿಲ್ಲ.

