ಬಾಗಲಕೋಟೆ: ಮನೆಯ ಶೆಡ್‌ನಲ್ಲಿ ಮಲಗಿದ್ದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ

ಬಾಗಲಕೋಟೆ, (ಜೂನ್ 13): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.