ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 7 ಮಂದಿ ಸಜೀವ ದಹನ

ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 7 ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಡಾ. ವಿ. ಮುರುಗೇಶನ್ ತಿಳಿಸಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ.

ಹವಾಮಾನ ವೈಪರೀತ್ಯದದಿಂದ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.