ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್

ಮಂಗಳೂರು, ಜೂನ್​ 14: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಧಾರಾಕಾರ ಮಳೆ‌ಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು‌ ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ‌ವಾಗವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಗುಡ್ಡ ಕುಸಿದಿದೆ. ಅದೃಷ್ಟವಶಾತ ಯಾವುದೇ ಅನಾಹುತ ಸಂಭವಿಸಿಲ್ಲ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್​ ಆಗಿದೆ. ಒಂದು ಬದಿಯ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಸಂಚಾರ ನಡೆಸುತ್ತಿವೆ.