ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್ ಶೆಟ್ಟಿ

ಓಂ ಪ್ರಕಾಶ್ ರಾವ್ ಅವರು ‘ಫೀನಿಕ್ಸ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಆ್ಯಕ್ಷನ್ ದೃಶ್ಯದ ವೇಳೆ ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಚಿತ್ರೀಕರಣದ ಸೆಟ್​ನಲ್ಲಿ ಕೆಲವು ಕಾಲ ಆತಂಕ ಸೃಷ್ಟಿ ಆಗಿತ್ತು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರಿಂದ ಅನಾಹುತ ತಪ್ಪಿಹೋಗಿದೆ. ಭಾಸ್ಕರ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಈ ಬಗ್ಗೆ ಭಾಸ್ಕರ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ಯಾವುದೇ ಗಂಭೀರ ಗಾಯ ಆಗಿಲ್ಲ. ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೆವು. ಆದರೂ ಸಣ್ಣ ಗಾಯ ಆಯಿತು. ಈಗ ವಾಸಿ ಆಗಿದೆ. ಯಾವ ಸಮಸ್ಯೆಯೂ ಇಲ್ಲ. ಆರಾಮಾಗಿದ್ದಿನಿ’ ಎಂದು ಅವರು ಹೇಳಿದ್ದಾರೆ.