ಶಾಲಾ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಆಂದ್ರ ಪ್ರದೇಶ: ಶಾಲಾ ವಿದ್ಯಾರ್ಥಿಗಳಿದ್ದ ಸ್ಕೂಲ್ ಬಸ್ಸೊಂದು ಅಪಘಾತಕ್ಕೀಡಾಗಿ ಇಬ್ಬರು ಗಾಯಗೊಂಡ ಘಟನೆ ಬುಚಿರೆಡ್ಡಿಪಾಲೆಮ್ ಮಿನಗಲ್ಲು ಬಳಿ ನಡೆದಿದೆ. ಶಾಲಾ ಬಸ್ಸಿನಲ್ಲಿ 9 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿದ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಬಿದ್ದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.