ಬೆಂಗಳೂರು: ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸುವ ಮುನ್ನ ಎಚ್ಚರವಿರಲಿ. ಯಾಕಂದ್ರೆ ಬೆಳ್ಳಂಬೆಳಿಗ್ಗೆ ಕಂಠಪೂರ್ತಿ ಕುಡಿದು ಸ್ಕೂಲ್ ವ್ಯಾನ್‌ಗಳನ್ನು ಓಡಿಸುತ್ತಿದ್ದಾರೆ. ಇಂತಹ ಘಟನೆಯೊಂದು ಆರ್‌ಆರ್ ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಹೌದು, ಶಾಲೆಗಳು ಶುರುವಾದ ಹಿನ್ನೆಲೆ ಸಂಚಾರಿ ಪೊಲೀಸರು ಶಾಲಾ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಡ್ರೈವರ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಸಂಚಾರಿ ಪೊಲೀಸರು ಶಾಲಾ ವಾಹನ ಚಾಲಕನೊಬ್ಬನ ಡಿಡಿ ಚೆಕ್ ಮಾಡಿದ್ದು, ರೀಡಿಂಗ್ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.
ಕಂಠಪೂರ್ತಿ ಕುಡಿದು ವಾಹನ ಚಲಾಯಿಸುತ್ತಿರುವುದು ತಿಳಿದುಬಂದಿದ್ದು, ಇದೇ ಅವಸ್ಥೆಯಲ್ಲಿಯೇ ಹಲವು ಕಡೆ ವಾಹನ ಚಾಲನೆ ಮಾಡಿಕೊಂಡು ಬಂದಿರುವುದಾಗಿ ಪತ್ತೆಯಾಗಿದೆ. ಸದ್ಯ ಪೊಲೀಸರು ವಾಹನ ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದು, ಸಂಬಂಧಪಟ್ಟ ಖಾಸಗಿ ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

