ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕರವಾಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಅಂದರೆ ಜೂ.,17 ರಂದು ಉತ್ತರ ಕನ್ನಡ ಜಿಲ್ಲೆಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ ,ಸಿದ್ದಾಪುರ, ಯಲ್ಲಾಪುರ ತಾಲೂಕಿನಲ್ಲಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲಾಡಳಿತಗಳು ನದಿ ತೀರ ಮತ್ತು ತಗ್ಗು ಪ್ರದೇಶದ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ…

