ಮಡಿಕೇರಿ, ಜೂನ್ 17: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ.

ಭಾಗಮಂಡಲ-ನಾಪೋಕ್ಲು ಮಾರ್ಗದ ರಸ್ತೆ ಕೂಡ ಜಲಾವೃತಗೊಂಡಿದೆ. ನೂತನ ಫ್ಲೈಓವರ್ ಇರುವುದರಿಂದ ಸಂಚಾರ ನಿರಾತಂಕವಾಗಿ ಸಾಗಿದೆ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

