ಕೊಟ್ಟಿಯೂರು ಶಿವ ದೇಗುಲಕ್ಕೆ ಭೇಟಿ ಕೊಟ್ಟ ನಟ ದರ್ಶನ್

ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ ಟೆಂಪನ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಕೇರಳದ ಕೊಟ್ಟಿಯೂರು ಶಿವ ದೇವಾಲಯವು ಭಾರತದ ಅತ್ಯಂತ ಪ್ರಾಚೀನ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿವರ್ಷವೂ ವೈಶಾಖ ಮಾಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಈ ದೇವಸ್ಥಾನವು ದಕ್ಷಿಣ ಕಾಶಿ ಎಂದು ಕರೆಯಲ್ಪಡುವುದರಿಂದ ಅದರ ಧಾರ್ಮಿಕ ಮಹತ್ವವು ಅಪಾರವಾಗಿದೆ.

ಕೆಲ ತಿಂಗಳ ಹಿಂದೆ ಕಣ್ಣೂರು ಬಳಿಯ ಶ್ರೀಕ್ಷೇತ್ರ ಮಡಾಯಿ ಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಶತ್ರು ಸಂಹಾರ ಯಾಗ ಮಾಡಿಸಿ, ಪೂಜೆ ಸಲ್ಲಿಸಿದ್ದರು