ಆ. 20 ರಂದು ಕೋಟಾದಲ್ಲಿ ವಿದ್ಯುತ್ ಅದಾಲತ್

ಹೊನ್ನಾವರ: ಕರ್ನಾಟಕ ಸರಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಹೊನ್ನಾವರ ಉಪವಿಭಾಗದ ಕೋಟಾ ಗ್ರಾಮದಲ್ಲಿ ಆ. 20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ರವರೆಗೆ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂದು ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.