
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದಾಗ್ಯೂ, ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ..
ರಾಜ್ಯ ಪ್ರವೇಶಿಸಿರುವ ಮುಂಗಾರು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿದೆ. ನಿರಂತರ ಮಳೆಯಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಗಳ ನೀರು ಉಕ್ಕಿ ಹರಿಯುತ್ತಿದ್ದು, ಕೆಲವು ಪ್ರದೇಶಗಳು ಮುಳಗಡೆಯಾಗಿವೆ. ಕಳೆದ ಎರಡು ದಿನಗಳಿಂದ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದು. ಇದರ ನಡುವೆಯೂ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.
ಉತ್ತರ ಕನ್ನಡ ಜಿಲ್ಲಾಡಳಿತ ಕಡಲತೀರಕ್ಕೆ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಿದೆ. ಮುರ್ಡೇಶ್ವರ ಮತ್ತು ಕಾರವಾರ ಕಡಲತೀರದಲ್ಲಿ ಕೆಂಪು ಬಾವುಟ ನೆಟ್ಟಿದ್ದು, ಪ್ರವಾಸಿಗರು ಆಗಮಿಸಿದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಅಲೆಗಳು 2-7 ಮೀಟರ್ನಿಂದ 3.3 ಮೀಟರ್ ಎತ್ತರದ ತನಕ ಏಳುವ ಸಾಧ್ಯತೆ ಇದ್ದು, ಮೀನುಗಾರರಿಗೆ ಮತ್ತು ಸಮುದ್ರದಲ್ಲಿ ಇಳಿಯುವರಿಗೆ ತೀರಾ ಅಪಾಯಕಾರಿಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಪ್ರವಾಸಿಗರಿಗೆ ಮತ್ತು ಮೀನುಗಾರಿಕೆಗೆ ನಿಷೇಧ ಹೇರಿದ್ದಾರೆ.
ಜಿಲ್ಲೆಯ ಎಲ್ಲ ಬೀಚ್ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ..
ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
