ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು. ನೂರಾರು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ರೂಪಾಲಿ ನಾಯ್ಕ್ ಅವರಿಗೆ ಶುಭ ಹಾರೈಸಿದರು. ಸೇಬಿನ ಹಾರ ಹಾಕಿ ಶಾಸಕರಿಗೆ ಸನ್ಮಾನಿಸಿದರು. ಈ ವೇಳೆ ಕೇಕ್ ಕತ್ತರಿಸಿ ಸಂಭ್ರಮದಿಂದ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಇನ್ನು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಕಾರವಾರ ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಕಾರವಾರ ನಗರ ಘಟಕದ ಯುವಮೋರ್ಚಾ ಅಧ್ಯಕ್ಷ ಶುಭಂ ಕಳಸ್ ಸೇರಿದಂತೆ ಯುವಮೋರ್ಚಾ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿನಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.