
ಝಾಗ್ರೆಬ್: ಕೆನಡಾ ಪ್ರವಾಸ ಮುಗಿಸಿ ಕ್ರೊಯೇಷಿಯಾಗೆ ತೆರಳಿದ ಪ್ರಧಾನಿ ಮೋದಿ ಅಲ್ಲಿನ ಪ್ರಧಾನಿ ಪ್ಲೆಂಕೋವಿಕ್ ಅವರನ್ನು ಭೇಟಿ ಮಾಡಿ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಪರಸ್ಪರ ಎರಡು ರಾಷ್ಟ್ರಗಳ ವ್ಯಾಪಾರ ವೃದ್ಧಿಯ ಒಪ್ಪಂದಕ್ಕೆ ಉಭಯ ನಾಯಕರು ಸಹಿ ಹಾಕಿದ್ದಾರೆ. ಕೃಷಿ, ವಿಜ್ಞಾನ, ತಂತ್ರಜ್ಞಾನ ಹಾಗೂ ಸಂಸ್ಕೃತಿ ಸೇರಿದಂತೆ ಹಲವು ವ್ಯಾಪಾರ ವಹಿವಾಟು ಬಗ್ಗೆ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ.
ಕೆನಡಾದಿಂದ ಝಾಗ್ರೆಬ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕ್ರೊಯೇಷಿಯಾದ ಭಾರತೀಯ ವಲಸಿಗ ಸಮುದಾಯವು ಗಾಯಿತ್ರಿ ಮಂತ್ರ ಪಠಿಸಿ ಸ್ವಾಗತಿಸಿತು. ಇದೇ ವೇಳೆ, ಜನರು ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಮುಂತಾದ ಘೋಷಣೆಗಳೊಂದಿಗೆ ಸ್ವಾಗತಿಸಿದರು.
ಕ್ರೊಯೇಷಿಯಾಕ್ಕೆ ತೆರಳುವ ಮುನ್ನ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು. ಈ ವೇಳೆ ಕೆನಡಾ ಪ್ರಧಾನಿ ಕಾರ್ನಿ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಭದ್ರತೆ, ನಾವಿನ್ಯತೆ ಹಾಗೂ ತಂತ್ರಜ್ಞಾನದ ಕುರಿತು ಮೋದಿ ಚರ್ಚಿಸಿದ್ದಾರೆ.

