ರೈತರಿಗೆ ಸಿಹಿ ಸುದ್ದಿ.. KRS ಡ್ಯಾಮ್ ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು..?

ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಹೆಚ್ಚಾದ ಕಾರಣ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇಂದು ಕೆಆರ್‌ಎಸ್ ಡ್ಯಾಂಗೆ 34,092 ಕ್ಯೂಸೆಕ್ ಒಳಹರಿವು ಇದ್ದು, ಡ್ಯಾಂ ನೀರಿನ ಮಟ್ಟ 115.78 ಅಡಿ ತಲುಪಿದೆ. ಸದ್ಯ 37.947 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು 9 ಅಡಿ ಅಷ್ಟೇ ಬಾಕಿ ಇದೆ.