
ಹೊನ್ನಾವರ– ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ.ಪಿ.ಇ.ಸೊಸೈಟಿಯ ಕೇಂದ್ರೀಯ ವಿದ್ಯಾಲಯದಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಎಲ್ಲ ವಿದ್ಯಾರ್ಥಿಗಳು ಈ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ದೈಹಿಕ ಶಿಕ್ಷಕರಾದ ಶ್ರೀ ದಯಾನಂದ ಗಣಪತಿ ನಾಯ್ಕ ಇವರ ಮಾರ್ಗದರ್ಶನದಲ್ಲಿ ಯೋಗ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ದೇಹ ಸಡಿಲಗೊಳಿಸುವ ವ್ಯಾಯಾಮ, ಯೋಗ ಶ್ಲೋಕ, ಸೂರ್ಯನಮಸ್ಕಾರ, ನಿಂತು ಮಾಡುವ ಆಸನ, ಕುಳಿತು ಮಾಡುವ ಆಸನಗಳು, ಪ್ರಾಣಾಯಾಮ, ಧ್ಯಾನ, ಸಂಕಲ್ಪ, ಶಾಂತಿ ಮಂತ್ರ ಮತ್ತು ಘೋಷ ವಾಕ್ಯದೊಂದಿಗೆ ಮುಕ್ತಾಯಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ವಿಜಯಲಕ್ಷ್ಮೀ ಎಂ.ನಾಯ್ಕ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು.




