ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರು, ಜೂನ್ 22: ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲವಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ತುಸು ಹೆಚ್ಚಿದೆ. ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಒಣಹವೆ

ಮುಂದುವರೆಯಲಿದೆ. ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಕದ್ರಾ, ಆಗುಂಬೆ, ಕ್ಯಾಸಲ್​ರಾಕ್, ಖಾನಾಪುರ್, ಮಂಕಿ, ಯಲ್ಲಾಪುರ, ಸಿದ್ದಾಪುರ, ಭಾಗಮಂಡಲ, ಕಮ್ಮರಡಿ, ಶೃಂಗೇರಿ, ಕೊಪ್ಪ, ಸೋಮವಾರಪೇಟೆ, ಮಾಣಿ, ಪುತ್ತೂರು, ಬೆಳ್​ತಂಗಡಿ, ಗೇರುಸೊಪ್ಪ, ಅಂಕೋಲಾ, ಜೋಯ್ಡಾ, ಹಿರೇಕೆರೂರು, ಸಂಕೇಶ್ವರ, ಲೋಂಡಾ, ನಿಪ್ಪಾಣಿ, ಧಾರವಾಡ, ಆನವಟ್ಟಿ, ದಾವಣಗೆರೆ, ಹುಣಸೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.