
ಶಿರಸಿ : ನಗರದ ನಿಲೇಕಣಿ ಕುಮಟಾ ರಸ್ತೆ ಬಳಿ ಕಾರು -ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿದು ಬಂದಿಲ್ಲ.
