ಪ್ರೀತಿಸಿದ ಯುವತಿಯಿಂದ ಕಿರುಕುಳಕ್ಕೊಳಗಾಗಿ ಓರ್ವ ಯುವಕ ಆತ್ಮಹತ್ಯೆ 

ದೇವನಹಳ್ಳಿ, ಜೂನ್​ 23: ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್​, ಆಕೆಗೆ ಬೇರೊಬ್ಬನ‌ ಜೊತೆ ಸಂಬಂಧವಿತ್ತು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.

ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ

ಮಾತ್ರೆ ಸೇವಿಸಿದ್ದ ಮಂಜುನಾಥ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್​ವರ್ಡ್​ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ.