
ನವದೆಹಲಿ: ರಾಷ್ಟ್ರಪತಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್ ಮುಖಾಮುಖಿಯಾದರು.
ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ನವದೆಹಲಿ ತೆರಳಿದ್ದರು. ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಮುಖಾಮುಖಿಯಾದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿ, ಶುಭ ಹಾರೈಸಿದರು
ಸಿಎಂ ಸಿದ್ದರಾಮಯ್ಯ ಅವರು ಸಚಿವರಾದ ಮಹದೇವಪ್ಪ, ಕೆ.ಜೆ ಚಾರ್ಜ್, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯಪಾಲರಿಂದ ಬಂದಿರುವ ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಏಳು ಮಸೂದೆಗೆಳು ಯಾವವು?
1. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ, 2015
2. ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ 2024.
3. ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2024.
4. ನೋಟರಿಗಳು (ಕರ್ನಾಟಕ ತಿದ್ದುಪಡಿ) ಮಸೂದೆ, 2025
5. ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2025
6. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಕಾಯ್ದೆ, 2025.
7. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ (ತಿದ್ದುಪಡಿ) ಕಾಯ್ದೆ, 2024



