ಇಸ್ರೇಲ್‌- ಇರಾನ್‌ ಯುದ್ಧ ಮುಕ್ತಾಯ; ಕದನ ವಿರಾಮ ಹೇಳಿದ  ಟ್ರಂಪ್‌

ವಾಷಿಂಗ್ಟನ್‌: ಕಳೆದ 12 ದಿನಗಳಿಂದ ಇಸ್ರೇಲ್‌ ಮತ್ತು ಇರಾನ್‌ ಮಧ್ಯೆ ನಡೆಯುತ್ತಿದ್ದ ಸಂಘರ್ಷಕ್ಕೆ ಕದನ ವಿರಾಮ ಘೋಷಣೆಯಾಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಯುದ್ಧ ಅಧಿಕೃತವಾಗಿ ಅಂತ್ಯಗೊಂಡಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ ಎಂದು ಘೋಷಣೆ ಮಾಡಿವೆ.

ಟ್ರಂಪ್‌ ಹೇಳಿದ್ದೇನು?
ಕದನ ವಿರಾಮಕ್ಕೆ ಇರಾನ್‌ ಮತ್ತು ಇಸ್ರೇಲ್‌ ಒಪ್ಪಿಕೊಂಡಿದೆ. 12 ನೇ ದಿನದ ಯುದ್ಧದ ಅಧಿಕೃತ ಅಂತ್ಯವನ್ನು ಜಗತ್ತು ಸ್ವಾಗತಿಸುತ್ತದೆ. ಕದನ ವಿರಾಮದ ಸಮಯದಲ್ಲಿ ಎರಡು ದೇಶಗಳು ಶಾಂತಿ ಮತ್ತು ಗೌರವದಿಂದ ಇರಬೇಕು.

ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ ಇಸ್ರೇಲ್ ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ.

ಈ ಯುದ್ಧ ವರ್ಷಗಳ ಕಾಲ ನಡೆಯುತ್ತಿತ್ತು ಮತ್ತು ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು. ಈ ರೀತಿ ಆಗಲಿಲ್ಲ ಮತ್ತು ಎಂದಿಗೂ ಈ ರೀತಿ ಆಗುವುದುಇಲ್ಲ. ದೇವರು ಇಸ್ರೇಲ್ ಮತ್ತು ಇರಾನ್ ಅನ್ನು ಆಶೀರ್ವದಿಸಲಿ, ದೇವರು ಮಧ್ಯಪ್ರಾಚ್ಯವನ್ನು ಆಶೀರ್ವದಿಸಲಿ, ದೇವರು ಅಮೆರಿಕವನ್ನು ಆಶೀರ್ವದಿಸಲಿ ಮತ್ತು ದೇವರು ಜಗತ್ತನ್ನು ಆಶೀರ್ವದಿಸಲಿ. ಎಲ್ಲರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.