ಮಲೈಮಹದೇಶ್ವರ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 96.33 ಅಂಕ ಪಡೆದ ಶಿರಸಿಯ ಚಂದನ ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ತುಳಸಿ ಹೆಗಡೆ ಅವರನ್ನು ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯ್ತು..

ಅಂತಿಮ ಪರೀಕ್ಷೆಗೆ ವಾರ ಮೊದಲೂ ಯಕ್ಷಗಾನ ಕುಣಿದು ಎಸ್ಸೆಸ್ಸೆಲ್ಸಿಯಲ್ಲಿ ಶೇ.96.33 ಅಂಕ ಸಾಧನೆ ಮಾಡಿದ ತುಳಸಿ ಹೆಗಡೆ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ, ಹುನೂರು ಶಾಸಕ ಎಂ.ಆರ್.ಮಂಜುನಾಥ, ಕೆಯುಡಬ್ಲುಜೆ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಲೋಕೇಶ್, ಉತ್ತರ ಕನ್ನಡ ಸಂಘದ ಅಧ್ಯಕ್ಷ ಜಿ.ಸು.ಬಕ್ಕಳ ಇತರರು ಗೌರವಿಸಿದರು. ಸಾಲೂರುಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ನೀಡಿದ್ದರು.


